ಗಜೇಂದ್ರಗಡದಲ್ಲಿ ಸರಣಿ ಕಳ್ಳತನ

serial theft at apmc shops at gadag

15-03-2018

ಗದಗ: ಜಿಲ್ಲೆಯ ಗಜೇಂದ್ರಗಡದಲ್ಲಿ ಸರಣಿ ಕಳ್ಳತನ ನಡೆದಿದೆ. ಪಟ್ಟಣದ ಎಪಿಎಂಸಿ ಆವರಣದಲ್ಲಿನ 3 ಮಳಿಗೆಗಳ ಬೀಗ ಒಡೆದು ಒಳನುಗ್ಗಿರುವ ದುಷ್ಕರ್ಮಿಗಳು ಸುಮಾರು 50,000 ನಗದು ಸೇರಿದಂತೆ ಇತರೆ ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ವಿನಾಯಕ ಟ್ರೇಡಿಂಗ್, ಶ್ರೀಶೈಲ ಮಲ್ಲಿಕಾರ್ಜುನ ಟ್ರೇಡಿಂಗ್ ಹಾಗೂ ಶಿವಾಜಿ ಟ್ರೇಡಿಂಗ್ ಮಳಿಗೆಗಳಲ್ಲಿ ಕಳ್ಳತನ ನಡೆದಿದೆ. ಭದ್ರತಾ ಲೋಪವೇ ಕಳ್ಳತನಕ್ಕೆ ಕಾರಣ ಎಂದು ಅಂಗಡಿ ಮಾಲೀಕರು ಆರೋಪಿಸಿದ್ದಾರೆ. ಗಜೇಂದ್ರಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

shop robbery Treaders ಗಜೇಂದ್ರಗಡ ಭದ್ರತಾ ಲೋಪ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ