ಟಿಪ್ಪು ಡ್ರಾಪ್ ನಿಂದ ಜಿಗಿದು ಮಹಿಳೆ ಆತ್ಮಹತ್ಯೆ

A woman suicide jumping from tippu drop

15-03-2018

ಬೆಂಗಳೂರು: ನಂದಿಬೆಟ್ಟದ ಟಿಪ್ಪು ಡ್ರಾಪ್‍ನಿಂದ ಕೆಳಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೋಲಾರ ಜಿಲ್ಲೆ ಮಾಲೂರು ಮೂಲದ ಶ್ವೇತಾ (32)ಎಂದು ಗುರುತಿಸಲಾಗಿದೆ. ನಿನ್ನೆ ಮದ್ಯಾಹ್ನ ನಂದಿ ಗಿರಿಧಾಮಕ್ಕೆ ಬಂದಿದ್ದ ಶ್ವೇತಾ ಬೆಟ್ಟದ ಮೇಲೆ ಒಂದು ಸುತ್ತನ್ನ ಹಾಕಿ ಟಿಪ್ಪು ಡ್ರಾಪ್ ಬಳಿ ಬಂದು ಮೇಲಿನಿಂದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ವಿಚಾರದ ಹಿನ್ನೆಲೆ ಮನೆಯಲ್ಲಿ ಜಗಳ ಮಾಡಿಕೊಂಡು ಬಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ನಂದಿ ಗಿರಿಧಾಮ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

nandi hills tippu drop ಆತ್ಮಹತ್ಯೆ ಗಿರಿಧಾಮ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ