ಕಳ್ಳರಿಂದ 1ಲಕ್ಷ ಮೌಲ್ಯದ ಚಿನ್ನಾಭರಣ ವಶ

Rs.1lakh worth of gold jewelery seized from thieves

15-03-2018

ಬೆಂಗಳೂರು: ಬೀಗ ಹಾಕಿದ ಮನೆಗಳನ್ನು ಗುರುತಿಸಿ ರಾತ್ರಿ ವೇಳೆ ಕನ್ನಗಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಹೆಬ್ಬಾಳ ಪೊಲೀಸರು 1 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡು 2ಕನ್ನಗಳವು ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ.

ರಾಜರಾಜೇಶ್ವರಿ ನಗರದ ವಿನಯ್ ಗೌಡ (23), ಮುದ್ದನಪಾಳ್ಯದ ಕಿರಣ್ ಕುಮಾರ್ (22) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 1 ಲಕ್ಷ ಮೌಲ್ಯದ 30 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡು 2 ಕನ್ನಗಳವು ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಆರೋಪಿಗಳು ಕಳೆದ ಫೆ. 4 ರಂದು ಹೆಬ್ಬಾಳದ ತಿರುಪತಿರಾವ್ ಎಂಬುವರು ಕುಟುಂಬ ಸಮೇತ ಚಿತ್ತೂರಿಗೆ ಹೋಗಿದ್ದು, ಅವರ ಮನೆ ಬಾಗಿಲು ಮುರಿದು ನಗದು, ಚಿನ್ನಾಭರಣಗಳನ್ನು ಕಳವು ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡ ಹೆಬ್ಬಾಳ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆಂದು ಡಿಸಿಪಿ ಚೇತನ್ ಸಿಂಗ್ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

jewellery thives ಡಿಸಿಪಿ ಆರೋಪಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ