500,1000 ಮುಖಬೆಲೆಯ ಹಳೆಯ ನೋಟು ಬದಲಾಯಿಸುತ್ತಿದ್ದ ಆರೋಪಿಗಳ ಬಂಧನ

Kannada News

10-05-2017

ಬೆಂಗಳೂರು,ಮೇ.10- ರದ್ದಾಗಿರುವ  500, 1000 ಮುಖಬೆಲೆಯ ಹಳೆಯ ನೋಟುಗಳನ್ನು ಹೊಸ ನೋಟುಗಳಿಗೆ ಬದಲಾಯಿಸುತ್ತಿದ್ದ ಇಬ್ಬರನ್ನು ಬಸವನಗುಡಿ ಪೊಲೀಸರು ಬಂಧಿಸಿ 95 ಲಕ್ಷ ಹಳೆಯ ನೋಟುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಸೇಲಂನ ಶಿವರಾಮಪುರಂನ ಸಾಯಿಕಿರಣ್ (32), ಹಬ್ಬಿಗೆರೆಯ ರಾಜೇಶ್ ಕುಮಾರ್ (40) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 1 ಸಾವಿರ ಮುಖಬೆಲೆಯ 95 ಲಕ್ಷ ನೋಟುಗಳನ್ನು ವಶಪಡಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಡಾ. ಎಸ್.ಡಿ. ಶರಣಪ್ಪ ತಿಳಿಸಿದ್ದಾರೆ.
ಆರೋಪಿಗಳು ಬಸವನಗುಡಿಯ ಕೃಷ್ಣರಾವ್ ಪಾರ್ಕ್ ಮುಖ್ಯ ಧ್ವಾರದ ಬಳಿ ಹಳೆಯ ನೋಟುಗಳನ್ನು ಹೊಸ ನೋಟುಗಳಿಗೆ ಬದಲಿಸುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಸ್ಟನ್ಲೆನ್ಸ್ ವ್ಯವಹಾರ ನಡೆಸುತ್ತಿದ್ದು, ತಮ್ಮಲ್ಲಿದ್ದ ಹಳೆಯ ಹಣವನ್ನು ಬದಲಾಯಿಸಿಕೊಳ್ಳಲು ಯತ್ನಿಸುತ್ತಿದ್ದರು ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ.
 

Links :
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ