ತಹಶೀಲ್ದಾರ ವರ್ಗಾವಣೆ ಖಂಡಿಸಿ ಪ್ರತಿಭಟನೆ

transfer of Tahsildar: farmers protests

15-03-2018

ಶಿವಮೊಗ್ಗ: ತಹಶೀಲ್ದಾರರ ವರ್ಗಾವಣೆ ಖಂಡಿಸಿ ತಾಲ್ಲೂಕಿನ ರೈತರು ಹಾಗೂ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದ್ದಾರೆ. ನಗರದ ತಾಲ್ಲೂಕು ಕಚೇರಿ ಮುಂಭಾಗ ಜಮಾಯಿಸಿದ  ರೈತರು, ಜೆಡಿಎಸ್ ಕಾರ್ಯಕರ್ತರು ಶಿವಮೊಗ್ಗ ತಹಶೀಲ್ದಾರ ಮಂಜೇಗೌಡ ವರ್ಗಾವಣೆ ಖಂಡಿಸಿ, ವರ್ಗಾವಣೆ ಆದೇಶ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ಕಳೆದ 6ತಿಂಗಳ ಹಿಂದೆ ಶಿವಮೊಗ್ಗ ತಹಿಶೀಲ್ದಾರಾಗಿ ಮಂಜೇಗೌಡರು ನೇಮಕವಾಗಿದ್ದರು. ಏಕಾಏಕಿ ವರ್ಗಾವಣೆ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ.


ಸಂಬಂಧಿತ ಟ್ಯಾಗ್ಗಳು

farmers protest ತಹಶೀಲ್ದಾರ ತಹಶೀಲ್ದಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ