ಆರ್‌.ಟಿ.ಒ ಚೆಕ್ ಪೋಸ್ಟ್ ಮೇಲೆ ಎಸಿಬಿ ದಾಳಿ

ACB raid on zalki rto check post

16-03-2018

ವಿಜಯಪುರ‌: ಇಂಡಿ ತಾಲ್ಲೂಕಿನ ಝಳಕಿ ಬಳಿಯ ಆರ್.ಟಿ.ಓ ಚೆಕ್ ಪೋಸ್ಟ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎಸಿಬಿ ಎಸ್ಪಿ ಅಮರನಾಥ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು 25,000ರೂ ನಗದು ಹಾಗು ಖಾಸಗಿ ಐವರು ಏಜೆಂಟ್ಸ್, ಇಬ್ಬರು ಹೋಮ್‌ಗಾರ್ಡ್ಸ್ಗಳನ್ನು ವಶಕ್ಕೆ ಪಡೆದಿದ್ದಾರೆ. ಚೆಕ್ ಪೋಸ್ಟ್ ನಲ್ಲಿನ ದಾಖಲಾತಿಗಳ ಪರಿಶೀಲನೆ ವೇಳೆ ಅವ್ಯವಹಾರ ಕಂಡುಬಂದಿದೆ ಎಂದು ತಿಳಿದು ಬಂದಿದೆ. ಇದೇ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಹಣವನ್ನೂ ಜಪ್ತಿ ಮಾಡಿದ್ದಾರೆ. ಚೆಕ್ ಪೋಸ್ಟ್ ನಲ್ಲಿ ಅಕ್ರಮ ನಡೆಯುತ್ತಿರುವುದರ ಬಗ್ಗೆ ಬಂದ ದೂರುಗಳನ್ನು ಆಧರಿಸಿ ದಾಳಿ ಮಾಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

check post ACB 2ಹೋಮ್‌ಗಾರ್ಡ್ ಏಜೆಂಟ್ಸ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ