ಸಿಡಿಲಿನ ಹೊಡೆತಕ್ಕೆ ಮನೆ ಭಸ್ಮ..!

heavy rain Thunder and lightning hit a home at chikkamagaluru

16-03-2018

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಸಿಡಿಲಿನ ಹೊಡೆತಕ್ಕೆ ಮನೆಯೊಂದು ಸುಟ್ಟು ಭಸ್ಮವಾಗಿದೆ. ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರಿನಲ್ಲಿನ ಅವಿನಾಶ್ ಎಂಬುವವರ ಮನೆಗೆ ಸಿಡಿಲು ಬಡಿದು ಟಿ.ವಿ.ಸ್ಫೋಟಗೊಂಡು, ಇಡೀ ಮನೆಗೆ ಬೆಂಕಿ ಆವರಿಸಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಅವಘಡದಿಂದ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Thunder and lightnin Rain ಪೀಠೋಪಕರಣ ಭಸ್ಮ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ