'ಟ್ವೀಟ್ ವಿಚಾರದಲ್ಲಿ ಬಿಜೆಪಿ‌ ಕೈವಾಡ’- ಪರಂ

G.Parameshwara blames bjp on Moily tweet issue

16-03-2018

ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ವೀರಪ್ಪ ಮೊಯಿಲಿ ಮಾಡಿದ್ದಾರೆ ಎನ್ನಲಾದ ಟ್ವೀಟ್ ವಿಚಾರದ ಕುರಿತು ನವದೆಹಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ವಿರುದ್ಧ ಆರೋಪಿಸಿರುವ ಪರಮೇಶ್ವರ್, ಇದರ ಹಿಂದೆ ಬಿಜೆಪಿ‌ ಕೈವಾಡ ಇರಬಹದು, ಈಗಾಗಲೇ ಬಿಜೆಪಿಯವರು ಸಾಕಷ್ಟು ಪ್ರತಿಕ್ರಿಯೆ ನೀಡಿದ್ದಾರೆ. ಶೀಘ್ರ ಪ್ರತಿಕ್ರಿಯೆ ಗಮನಿಸಿದರೇ ಬಿಜೆಪಿಗೆ ಸಂಬಂಧಿಸಿದ ವ್ಯಕ್ತಿಗಳೇ ಹ್ಯಾಕ್ ಮಾಡಿರುವ ಸಾಧ್ಯತೆಗಳಿಗೆ ಎಂದು ಹೇಳಿದ್ದಾರೆ. ಟ್ವೀಟ್ ಬಗ್ಗೆ ವೀರಪ್ಪ ಮೊಯಿಲಿ ಈಗಾಗಲೇ ಸ್ವಷ್ಟನೆ ನೀಡಿದ್ದಾರೆ. ಸೈಬರ್ ಕ್ರೈಂಗೆ ದೂರು ಕೊಡುವ ಬಗ್ಗೆಯೂ ಚರ್ಚಿಸಲಾಗುತ್ತಿದೆ ಎಂದು ತಿಳಿಸಿದರು. ಕಾಂಗ್ರೆಸ್ ಸಮಿತಿಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ನಿರ್ದಿಷ್ಟ ವಿಧಾನ ಇದೆ, ಹಲವಾರು ವಿಭಾಗಗಳ‌ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತೆ ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ