ನೇಣು ಬಿಗಿದುಕೊಂಡ ವಿದ್ಯಾರ್ಥಿನಿ

A teen girl committed suicide

16-03-2018

ಬೆಂಗಳೂರು: ಸ್ನೇಹಿತೆಯ ಹುಟ್ಟುಹಬ್ಬಕ್ಕೆ ಕಳುಹಿಸಲು ಪೋಷಕರು ನಿರಾಕರಿಸಿದ್ದರಿಂದ ನೊಂದ ಪಿಯುಸಿ ವಿದ್ಯಾರ್ಥಿನಿ ಅರ್ಪಿತಾ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಂಪೇಗೌಡ ನಗರದಲ್ಲಿ ನಡೆದಿದೆ. ಚಂದ್ರಿಕಾ ಮತ್ತು ಚಂದ್ರಶೇಖರ್ ದಂಪತಿಯ ಮಗಳು ಅರ್ಪಿತಾ(17) ನಿನ್ನೆ ಸಂಜೆ ಪೋಷಕರನ್ನು ಬರ್ತಡೇಗೆ ಹೋಗಲು ಕೇಳಿದ್ದಾಳೆ. ಆದರೆ ಪೋಷಕರು ಒಪ್ಪಲಿಲ್ಲ ಎನ್ನುವ ಕಾರಣಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪಿಇಎಸ್ ಕಾಲೇಜಿನಲ್ಲಿ ಕಾಮರ್ಸ್ ಓದುತ್ತಿದ್ದ ಅರ್ಪಿತ, ಸಂಜೆಯೇ ರೂಮ್ ಸೇರಿಕೊಂಡಿದ್ದಾಳೆ. ಬೆಳಿಗ್ಗೆ ಮಗಳನ್ನು ಎದ್ದೇಳಿಸಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಪೋಷಕರು ಆಸ್ಪತ್ರೆಗೆ ರವಾನಿಸಿದರೂ ಅಷ್ಟೊತ್ತಿಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮರಣೋತ್ತರ ಪರೀಕ್ಷೆ ವೇಳೆ ಕಣ್ಣು ದಾನ ಮಾಡಲು ಪೋಷಕರು ನಿರ್ಧರಿಸಿದ್ದಾರೆ. ಸ್ಥಳಕ್ಕೆ ಕೆಂಪೇಗೌಡ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Suicide student ಪೋಷಕರು ಪರೀಕ್ಷೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ