ಎಐಸಿಸಿ ಮಹಾ ಅಧಿವೇಶನಕ್ಕೆ ಚಾಲನೆ

Congress plenary session in indira gandhi stadium

17-03-2018

ನವದೆಹಲಿ: ಎಐಸಿಸಿ ಮಹಾ ಅಧಿವೇಶನ ನವದೆಹಲಿಯ ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಧ್ವಜಾರೋಹಣದ ಮೂಲಕ ಅಧಿವೇಶನಕ್ಕೆ ರಾಹುಲ್ ಗಾಂಧಿ ಚಾಲನೆ ನೀಡಿದರು. ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಪದವಿಗೇರಿದ ಬಳಿಕ ಮೊದಲ ಅಧಿವೇಶನ ಇದಾಗಿದೆ. ಅಧಿವೇಶನದಲ್ಲಿ ರಾಷ್ಟ್ರೀಯ ಮುಖಂಡರು ಸೇರಿದಂತೆ 12 ಸಾವಿರ ಮಂದಿ ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದಿಂದ ‌ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಸಚಿವರು, ಕೆಪಿಸಿಸಿ ಸದಸ್ಯರು ಭಾಗಿಯಾಗಿದ್ದಾರೆ.


ಸಂಬಂಧಿತ ಟ್ಯಾಗ್ಗಳು

AICC Rahul Gandhi ಅಧಿವೇಶನ ಕ್ರೀಡಾಂಗಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ