ಮೈಸೂರಿನ ಮಾನಂದವಾಡಿ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ

Kannada News

11-05-2017

ಮೈಸೂರು : ಮೈಸೂರಿನ ಮಾನಂದವಾಡಿ ರಸ್ತೆಯಲ್ಲಿ ಮೂವರು ಒಟ್ಟಿಗೆ ಪ್ರಯಾಣಿಸುತ್ತಿದ್ದ ಪಲ್ಸರ್ ಬೈಕ್ ವಿದ್ಯುತ್ ಕಂಬಕ್ಕೆ ರಭಸದಿಂದ ಡಿಕ್ಕಿಯೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದು ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಮೈಸೂರು ತಾಲೂಕು ಮಹದೇವಪುರದ ರಾಜೇಶ್ (22), ನಂದನ್ (21) ಮೃತಪಟ್ಟ ನತದೃಷ್ಟರು. ಕಳೆದ ಮಧ್ಯರಾತ್ರಿ ನಡೆದಿರುವ ಈ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಅಭಿಷೇಕ್ (20) ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿನ ಕೆ.ಆರ್.ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ