ನ್ಯಾ.ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹ

demanding for Justice Nagamon Das has demanded a report

17-03-2018

ಹುಬ್ಬಳ್ಳಿ: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ, ನ್ಯಾ.ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಜಾರಿಗೆ ಒತ್ತಾಯಿಸಿ ನಾಳೆ ಬೆಂಗಳೂರಿನ ಟೌನ್‌ ಹಾಲ್ ಮುಂದೆ ಸತ್ಯಾಗ್ರಹ ಮಾಡುವುದಾಗಿ, ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾಗಮೋಹನ್ ದಾಸ್ ಅವರ ಸಮಿತಿ ವರದಿಯನ್ನು ಅನುಷ್ಠಾನ ಮಾಡಬೇಕು. ವೀರಶೈವ ಹಾಗೂ ಲಿಂಗಾಯತ ಒಂದೇ ಅಲ್ಲ ಎರಡು ಬೇರೆ ಬೇರೆ, ಕೇವಲ ಪೌರಾಣಿಕ ವಿಚಾರಗಳನ್ನು ಇಟ್ಟುಕೊಂಡು ನಮ್ಮ ಜೊತೆ ಹೋರಾಟಕ್ಕೆ ಇಳಿದಿದ್ದಾರೆ ಎಂದರು. ವರದಿ ಅನುಷ್ಠಾನಕ್ಕೆ ಒತ್ತಾಯ ಮಾಡುತ್ತೇವೆ. ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಆರ್.ಎಸ್.ಎಸ್ ಬೆಂಬಲ ನೀಡಬೇಕು. ಸಿಎಂ ಒಬ್ಬ ವಿಚಾರವಾದಿ, ಯಾವುದೇ ಮೂಢನಂಬಿಕೆಗೆ ಒಳಗಾಗದೆ ವರದಿಯನ್ನ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

lingayat Mate Mahadevi ಮೂಢನಂಬಿಕೆ ಒತ್ತಾಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ