ವಿಷ ಸೇವಿಸಿ ರೈತ ಆತ್ಮಹತ್ಯೆ

farmer committed suicide with poison

17-03-2018

ಬೀದರ್: ಸಾಲದ ಬಾಧೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಬಲ್ಲೂರ(ಜೆ) ಗ್ರಾಮದಲ್ಲಿ ನಡೆದಿದೆ. ವಿಜಯಕುಮಾರ ಗುಂಡಪ್ಪ (30) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಬ್ಯಾಂಕ್ ಸೇರಿದಂತೆ ಕೈಸಾಲ ಮಾಡಿಕೊಂಡಿದ್ದ ರೈತ, ಇತ್ತ ಬೆಳೆಯೂ ಕೈಕೊಟ್ಟಿದ್ದು ಸಾಲಕ್ಕೆ ಬೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕ್ಷೇತ್ರದ ಶಾಸಕ ಪ್ರಭು ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ‌ವೈಯಕ್ತಿಕ ಪರಿಹಾರ ನೀಡಿದ್ದಾರೆ. ಸಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

farmer suicide ಸಾಂತ್ವನ ಪರಿಹಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ