ಸರ್ಕಾರದ ವಿರುದ್ಧ ಕೊಪ್ಪಳ ಬಿಜೆಪಿ ಆಕ್ರೋಶ

Prohibition of protest in Koppal..!

19-03-2018

ಕೊಪ್ಪಳ: ಇಂದು ಸಿಎಂ ಸಿದ್ದರಾಮಯ್ಯ ಅವರು ಕೊಪ್ಪಳಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ತುಂಗಭದ್ರಾ ಎಡದಂಡೆ ನಾಲೆಗೆ ನೀರು ಹರಿಸುವಂತೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ಮಾಡುವ ಸಾಧ್ಯತೆಗಳಿದ್ದು, ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಭಾಗಿಯಾಗದಂತೆ ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ. ಗಂಗಾವತಿ, ಕಾರಟಗಿ, ಕನಕಗಿರಿ, ಕೊಪ್ಪಳದ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕೊಪ್ಪಳ ಎಸ್ಪಿ ಪ್ರತಿಭಟನೆಗೆ ನಿಷೇಧ ಹೇರಿದ್ದಾರೆ. ರಾಜ್ಯ ಸರ್ಕಾರ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಕೊಪ್ಪಳ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

siddaramaiah protest ಆಕ್ರೋಶ ಪ್ರತಿಭಟನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ