ಮಾ.23ರಂದು ಚುನಾವಣಾ ದಿನಾಂಕ ಘೋಷಣೆ ಸಾಧ್ಯತೆ?

karnataka: Will the Election Date be announced on March 23?

19-03-2018

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಮಾರ್ಚ್ 23ರಂದು ಪ್ರಕಟವಾಗುವ ಸಾಧ್ಯತೆ ಇದೆ. ಚುನಾವಣಾ ದಿನಾಂಕ ಘೋಷಣೆಯಾದ ತಕ್ಷಣ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಚುನಾವಣಾ ಆಯೋಗದ ಮೂಲಗಳ ಮಾಹಿತಿ ಪ್ರಕಾರ ಇದೇ ವಾರದಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಮೇ 7ರಿಂದ 13ರೊಳಗೆ ಮತದಾನ ನಡೆಯುವ ಸಾಧ್ಯತೆ ಇದೆ. ದಿನಾಂಕ ಘೋಷಣೆಗೂ ಮೊದಲು ಒ.ಪಿ.ರಾವತ್ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ನೀತಿ ಸಂಹಿತೆ ಜಾರಿಗೂ ಮುನ್ನ ಸಂಬಂಧಪಟ್ಟ ಕೆಲಸಗಳನ್ನು ಮಾಡುತ್ತಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆಗೂ ಸಭೆ ನಡೆಸಲಾಗಿದ್ದು, ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಮಾರ್ಚ್ 23ರಂದು ಕೇಂದ್ರ ಚುನಾವಣಾ ಆಯುಕ್ತ ಒ.ಪಿ.ರಾವತ್ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಲಿದ್ದಾರೆ. ಮೇ 7ರಿಂದ 13ರೊಳಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ