‘ಶೀಘ್ರದಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ’-ಪರಂ19-03-2018

ಹಾಸನ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ. ಹೈಕಮಾಂಡ್ ಯಾರಿಗೇ ಟಿಕೆಟ್ ಕೊಟ್ಟರು ಆ ಕ್ಷೇತ್ರದ ಆಕಾಂಕ್ಷಿಗಳೂ ಸೇರಿದಂತೆ ಎಲ್ಲರು ಅವರ ಪರ ಪ್ರಚಾರ ಮಾಡುತ್ತಾರೆ ಎಂದು, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಮಾತು ಕೇಳಲು ಯುವಕರು ಉತ್ಸುಕರಾಗಿದ್ದಾರೆ. ಇದೇ ತಿಂಗಳ 21ರಂದು ರಾಹುಲ್ ಗಾಂಧಿ ಹಾಸನ ಪ್ರವಾಸ ಮಾಡಲಿದ್ದಾರೆ. ಸುಮಾರು ಒಂದು ಲಕ್ಷ ಮಂದಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಈ ಬಾರಿ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆಗೆ ಒತ್ತಾಯಿಸಿದ್ದೇವೆ ಎಂದು ತಿಳಿಸಿದ್ದಾರೆ. ಟ್ವೀಟ್ ವಿಚಾರದ ಕುರಿತು ಹರ್ಷ ಮೊಯಿಲಿಯವರಿಗೆ ನೋಟಿಸ್ ನೀಡಿದ್ದೇವೆ, ಉತ್ತರ ಕೊಟ್ಟ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ದೇವೇಗೌಡರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿ ಕಮಿಷನ್ ಪಡೆದಿರುವುದು ಯಾವುದಕ್ಕೆಂದು ದೇವೇಗೌಡರು ಹೇಳಲಿ ಎಂದು ತಿರುಗೇಟು ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

G.Parameshwara H.D.Deve Gowda ಪ್ರವಾಸ ಇವಿಎಂ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ