ಲಾಡ್ಜ್ ಗೆ ಎಳೆದೊಯ್ದು ಯುವತಿ ಮೇಲೆ ರೇಪ್

Rape on a young woman in lodge

19-03-2018

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬರನ್ನು ಲಾಡ್ಜ್ ಗೆ ಕರೆದೊಯ್ದು ಯುವಕನೊಬ್ಬ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಬೆಳಕಿಗೆ ಬಂದಿದೆ. ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ 25 ವರ್ಷದ ಯುವತಿಯ ಸ್ನೇಹ ಬೆಳೆಸಿ ವಿವಾಹವಾಗುವುದಾಗಿ ನಂಬಿಸಿ ಕೃತ್ಯ ಎಸಗಿದ್ದಾನೆ. ಆರೋಪಿ ಗಿರಿನಗರದ ಪವನ್ ರಾವ್(30)ನನ್ನು ಜೆಪಿ ನಗರ ಪೊಲೀಸರು ಬಂಧಿಸಿದ್ದಾರೆ.

ಒಳಾಂಗಣ ವಿನ್ಯಾಸಕಾರನಾಗಿದ್ದ ಪವನ್ ರಾವ್ ಪರಿಚಯವಾಗಿದ್ದ ಸಂತ್ರಸ್ಥ ಯುವತಿಯನ್ನು ಜೆ.ಪಿ.ನಗರದ ಮೆಟ್ರೋ ಸ್ಟೇಷನ್ ನಿಂದ ಕುಣಿಗಲ್ ಗೆ ಕರೆದುಕೊಂಡು ಹೋಗಿದ್ದಾನೆ. ಕಾರಿನಲ್ಲಿ ಯುವತಿಯ ಮೇಲೆ ಹಲ್ಲೆ ಮಾಡಿ ಲಾಡ್ಜ್ ಗೆ ಕರೆದೊಯ್ದು ಮದುವೆಯಾಗುವುದಾಗಿ ಅತ್ಯಾಚಾರ ಎಸಗಿ, ನಂತರ ವಿವಾಹವಾಗಲು ನಿರಾಕರಿಸಿದ್ದಾನೆ. ಈ ಸಂಬಂಧ ಸಂತ್ರಸ್ಥೆ ನೀಡಿದ ದೂರು ದಾಖಲಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಡಾ.ಶರಣಪ್ಪ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rape love sex dhoka ಸಂತ್ರಸ್ಥ ಲಾಡ್ಜ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ