‘ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಇಲ್ಲ’19-03-2018

ಬೆಂಗಳೂರು: ಟೆಕ್ನಿಕಲ್ ಕಾರಣಕ್ಕೆ ಬಿಟ್ಟರೆ ಮತ್ತಾವುದೇ ಕಾರಣಕ್ಕೆ ಲೋಡ್ ಶೆಡ್ಡಿಂಗ್ ಇಲ್ಲ ಎಂದು, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 4ವರ್ಷ ಬರಗಾಲದ ಪರಿಸ್ಥಿತಿಯಲ್ಲೂ ನಾವು ಉತ್ತಮ ರೀತಿಯಲ್ಲಿ ವಿದ್ಯುತ್ ವ್ಯವಸ್ಥೆ ಮಾಡಿದ್ದೇವೆ, ನಿರಂತರ ವಿದ್ಯುತ್ ಪೂರೈಕೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ. 900 ಮೆಗಾವ್ಯಾಟ್ ವಿದ್ಯುತ್ ಮುನ್ನೆಚ್ಚರಿಕೆಯಾಗಿ ಖರೀದಿ ಮಾಡಲಾಗಿದೆ. ಇನ್ನೂ 1000 ಮೆಗಾವ್ಯಾಟ್ ವಿದ್ಯುತ್ ಖರೀದಿಸುವ ಶಕ್ತಿ ಇದೆ ಎಂದ ಅವರು, ವಿದ್ಯುತ್ ಕಾಪಾಡುವುದು ಮತ್ತು ಪೂರೈಕೆ ಮಾಡುವಲ್ಲಿ ಸರ್ಕಾರ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುತ್ತಿದೆ. ವಿದ್ಯಾರ್ಥಿಗಳ ಬಗ್ಗೆ ನಮಗೆ ಕಾಳಜಿ ಇದೆ ಎಂದರು.

ಇದೇ ವೇಳೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್‌ ವಿರುದ್ಧ ಗರಂ ಆದ ಡಿಕೆಶಿ, ಸಚಿವ ಪ್ರಕಾಶ್ ಜಾವಡೇಕರ್ ಆರೋಪದಲ್ಲಿ ಹುರುಳಿಲ್ಲ, ಜಾವ್ಡೇಕರ್ ಹೇಳಿಕೆ ಶುದ್ಧ ಸುಳ್ಳು, ಲೋಡ್ ಶೆಡ್ಡಿಂಗ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮಾತನಾಡಲಾಗದೇ ಪ್ರಕಾಶ್ ಜಾವಡೇಕರ್ ಅವರಿಂದ ಮಾತನಾಡಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ