ಹಲ್ಲೆ ಪ್ರಕರಣ: ಬಿಜೆಪಿ ಮುಖಂಡ ಅಮಾನತು..!

police constable case: BJP leader Suspended..!

19-03-2018

ಬೆಂಗಳೂರು: ಪೊಲೀಸರ ಮೇಲೆ ಹಾಡಹಗಲೇ ಹಲ್ಲೆ ನಡೆಸಿದ ಆರೋಪಿಗಳಲ್ಲಿ ಓರ್ವ ಬಿಜೆಪಿ ಮುಖಂಡನಾಗಿದ್ದು, ಆತನನ್ನು ಪಕ್ಷದಿಂದ ಅಮಾನತು ಮಾಡುವಂತೆ ಈಗಾಗಲೇ ಸೂಚನೆ ನೀಡಿರುವುದಾಗಿ ಬಿಜೆಪಿ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿಸದಂತೆ ಆರೋಪಿಗಳಲ್ಲಿ ಒಬ್ಬನಾದ ಸಂದೀಪ್, ಶಾಸಕ ಅರವಿಂದ ಲಿಂಬಾವಳಿ ಬೆಂಬಲಿಗನಾಗಿದ್ದಾನೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅಶೋಕ್, ಆರೋಪಿ ಸಂದೀಪ್, ಗುಂಡೂರು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನಾಗಿದ್ದಾನೆ. ಹೀಗಾಗಿ ಆತನನ್ನು ಪಕ್ಷದಿಂದ ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ ಎಂದರು. ಉಳಿದ ಮೂವರು ಆರೋಪಿಗಳು ಯಾವ ಪಕ್ಷದವರು ಎನ್ನುವುದನ್ನು ಗೃಹಸಚಿವರು ಸ್ಪಷ್ಟಪಡಿಸಬೇಕು. ಆ ಮೂವರು ಕಾಂಗ್ರೆಸ್ ನವರು ಎಂದು ಹೇಳಲಾಗುತ್ತಿದೆ. ಅವರ ಹೆಸರು ಯಾಕೆ ಹೇಳುತ್ತಿಲ್ಲ ಎಂದು  ಪ್ರಶ್ನಿಸಿದರು. ಪೊಲೀಸರ ಮೇಲಿನ ಹಲ್ಲೆಗಳನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗಿದೆ ಎನ್ನುವುದು ಗೊತ್ತಾಗುತ್ತೆ. ಯಾರೇ ತಪ್ಪು ಮಾಡಿದರೂ ಅದು ತಪ್ಪು. ಹಲ್ಲೆ ಮಾಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಶೋಕ್ ಆಗ್ರಹಿಸಿದರು.


ಸಂಬಂಧಿತ ಟ್ಯಾಗ್ಗಳು

R.ashok police constable ಸೂಕ್ತ ಕ್ರಮ ಕಾನೂನು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ