ಬಸ್ ಡಿಕ್ಕಿ: ಬೈಕ್ ಸವಾರ ಸಾವು

KSRTC bus and bike accident: biker died

19-03-2018

ಬೆಂಗಳೂರು: ಚಿಂತಾಮಣಿಯ ಡಬಲ್ ರೋಡ್‍ನಲ್ಲಿ ವೇಗವಾಗಿ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ ಇಬ್ಬರು ಮಕ್ಕಳು ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಚಿಂತಾಮಣಿಯ ಅಂಜಿ (18)ಮೃತಪಟ್ಟಿದ್ದು, ಅಫಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ಮಕ್ಕಳನ್ನು ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಬ್ಬಕ್ಕೆಂದು ಎಂದು ತನ್ನ ಇಬ್ಬರು ಅಕ್ಕನ ಮಕ್ಕಳನ್ನು ಬೈಕಿನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದ್ದು, ಅಂಜಿ ಮೃತಪಟ್ಟಿದ್ದಾನೆ. ಈ ಘಟನೆ ನಂತರ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದು, ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

accident KSRTC ಗಂಭೀರ ಘಟನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ