ರಾಜ್ಯದ ವಿವಿಧೆಡೆ ಎಸಿಬಿ ದಾಳಿ

ACB attack on different parts of the state

20-03-2018

ರಾಜ್ಯದ ವಿವಿಧೆಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರು ಜಿಲ್ಲೆಯ ಉಪವಿಭಾಗಾಧಿಕಾರಿ ತಿಪ್ಪೇಸ್ವಾಮಿ ಮನೆ, ಕಚೇರಿ ಸೇರಿದಂತೆ, ಚಿತ್ರದುರ್ಗದಲ್ಲಿ ಎರಡು ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚಿತ್ರದುರ್ಗ ಎಸಿಬಿ ಡಿವೈಎಸ್ಪಿ ಜಿ.ಮಂಜುನಾಥ, ಶಿವಮೊಗ್ಗ ಡಿವೈಎಸ್ಪಿ ಚಂದ್ರಪ್ಪ ನೇತೃತ್ವದಲ್ಲಿ ನಾಲ್ಕು ಕಡೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಅಪಾರ ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಕಲಬುರ್ಗಿಯಲ್ಲೂ ಬೆಳ್ಳಂಬೆಳಿಗ್ಗೆ ಸಾರಿಗೆ ಇಲಾಖೆಯ ಭದ್ರತಾ ಅಧಿಕಾರಿ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಉಪ ಮುಖ್ಯ ಭದ್ರತಾಧಿಕಾರಿ ಶ್ರೀಪತಿ ದೊಡ್ಡ ಲಿಂಗಣ್ಣನವರ ನಿವಾಸ, ಧಾರವಾಡದ ಹಿರೇಕೆರೂರು ಮತ್ತು ದೇವದುರ್ಗ ನಿವಾಸಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿ ಕಡತಗಳ ಪರಿಶೀಲನೆ ನಡೆಸಿದ್ದಾರೆ.

ದಾವಣಗೆರೆಯಲ್ಲೂ ಎಸಿಬಿ ಅಧಿಕಾರಿಗಳು ‌ದುಡಾ ಜಾಂಯ್ಟ್ ಡೈರೆಕ್ಟರ್ ಹಾಗು ಕಾರ್ಪೊರೇಷನ್ ಕಚೇರಿಯಲ್ಲಿ ಲೈಸೆನ್ಸ್ ವಿಭಾಗದ ಇಂಚಾರ್ಜ್ ಆಗಿರುವ ಗೋಪಾಲಕೃಷ್ಣ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ದಾವಣಗೆರೆಯಲ್ಲಿನ ಮೂರು ಅಂತಸ್ತಿನ ಮನೆ. 4ನಿವೇಶನ, ಕೋಲ್ಕುಂಟೆ ಗ್ರಾಮದಲ್ಲಿ 8ಎಕರೆ ಜಮೀನು ಒಂದು ಕಾರು ಪತ್ತೆಯಾಗಿದೆ. ಎಸಿಬಿ ಡಿವೈಎಸ್ಪಿ ವಾಸುದೇವರಾಮ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ACB Raid ನೇತೃತ್ವ ಡೈರೆಕ್ಟರ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ