‘ಚುನಾವಣೆಯಲ್ಲಿ ಸಿಎಂಗೆ ಜನರೇ ಪಾಠ ಕಲಿಸುತ್ತಾರೆ’20-03-2018

ಶಿವಮೊಗ್ಗ: ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಶಿಫಾಸ್ಸಿನ ಹಿನ್ನೆಲೆ, ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿ, ಸಿಎಂ ಸಿದ್ದರಾಮಯ್ಯ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಜಾತಿ ವಿಚಾರದಲ್ಲಿ ಸಿದ್ದರಾಮಯ್ಯ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಅವರ ಕುತಂತ್ರ ರಾಜಕಾರಣ ಬಯಲಾಗಿದೆ, ರಾಜ್ಯದ ಆರೂವರೆ ಕೋಟಿ ಜನ ಸಿದ್ದರಾಮಯ್ಯಗೆ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ ಎಂದರು. ವೀರಶೈವ-ಲಿಂಗಾಯತ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ. ಮಠಾಧೀಶರಿಗೂ ಸಿದ್ದರಾಮಯ್ಯ ಗೊಂದಲ ಉಂಟು ಮಾಡಿದ್ದಾರೆ ಎಂದು ಕಿಡಿಕಾರಿದರು.


ಸಂಬಂಧಿತ ಟ್ಯಾಗ್ಗಳು

K.S.Eshwarappa Lingayat ಗೊಂದಲ ಧರ್ಮ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ