ಕಿಡಿಗೇಡಿಗಳ ಕೃತ್ಯ: ಕಾಂಗ್ರೆಸ್ ಫ್ಲೆಕ್ಸ್ ಧ್ವಂಸ

congress flexes destroyed in chikmagalur..!

21-03-2018

ಚಿಕ್ಕಮಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಚಿಕ್ಕಮಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆ, ನಗರದಲ್ಲಿ ರಾಹುಲ್ ಗೆ ಸ್ವಾಗತ ಕೋರಿ‌ ಹಾಕಲಾಗಿದ್ದ ಫ್ಲೆಕ್ಸ್ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ನಗರದ ಬೈಪಾಸ್ ರಸ್ತೆಯಲ್ಲಿ ಹಾಕಲಾದ ಫ್ಲೆಕ್ಸ್ಗಳನ್ನು ಧ್ವಂಸಗೊಳಿಸಿದ್ದಾರೆ. ಮುಂಜಾನೆಯಲ್ಲಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ನಗರದ ಹಲವೆಡೆ ಹಾಕಲಾಗಿದ್ದ  ಫ್ಲೆಕ್ಸ್ಗಳನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಕೃತ್ಯ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ಎಐಸಿಸಿ ರಾಹುಲ್ ಗಾಂಧಿ Flex bypass


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ