ಜಾತ್ರೆ ಬಗ್ಗೆ ಚರ್ಚೆ ವೇಳೆ ಕಲ್ಲುತೂರಾಟ

fight between 2 communities in davangere

21-03-2018

ದಾವಣಗೆರೆ: ಮಾರಿಕಾಂಬ ದೇವಿ ಜಾತ್ರೆ ಬಗ್ಗೆ ಹೆಬ್ಬಳಗೆರೆ ಗ್ರಾಮದಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ ಎರಡು ಸಮುದಾಯಗಳ ಮುಖಂಡರ ಮಧ್ಯೆ ವಾಗ್ವಾದ ವಿಕೋಪಕ್ಕೆ ತಿರುಗಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಗಲಾಟೆ ಮತ್ತು ಕಲ್ಲು ತೂರಾಟದಿಂದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲೆಯ ಚನ್ನಗಿರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಳೇ ವೈಷಮ್ಯದಿಂದ ಗಲಾಟೆ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

jatre davanagere ಮುಖಂಡ ಸಮುದಾಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ