ಯುವತಿ ಮೈ-ಕೈ ಮುಟ್ಟಿ ಕಿರುಕುಳ

sexula harrasement on a Girl

21-03-2018

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯ ಮೈ-ಕೈ, ಹಿಂಬದಿ ಮುಟ್ಟಿ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಹೀನಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ನಗರದ ಅಮೃತಹಳ್ಳಿಯ ಪಂಪ ಲೇಔಟ್‍ನಲ್ಲಿ ಕಳೆದ ಮಾರ್ಚ್ 19ರ ಸಂಜೆ ಸುಮಾರು 20 ವರ್ಷ ವಯಸ್ಸಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ, ಪಿಜಿ ಹಾಸ್ಟೆಲ್‍ಗೆ ನಡೆದು ಹೋಗುತ್ತಿದ್ದರು. ಈ ವೇಳೆ ಬೈಕ್‍ನಲ್ಲಿ ಹಿಂದಿನಿಂದ ಬಂದ ದುಷ್ಕರ್ಮಿಯೊಬ್ಬ ಯುವತಿಯ ಮೈ-ಕೈ, ಹಿಂಬದಿ ಮುಟ್ಟಿ ಅಸಭ್ಯವಾಗಿ ವರ್ತಿಸಿ, ಕಿರುಕುಳ ನೀಡಿದ್ದಾನೆ. ಕೂಡಲೇ ಯುವತಿಯು ರಕ್ಷಣೆಗಾಗಿ ಕೂಗಿ ಕೊಂಡಿದ್ದರಿಂದ ಹೆದರಿದ ದುಷ್ಕರ್ಮಿ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿರುವ ಅಮೃತಹಳ್ಳಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಕಲಾಕೃಷ್ಣಸ್ವಾಮಿ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

sexual harassment PG hostle ಕಿರುಕುಳ ರಕ್ಷಣೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ