ಮಡಿಕೇರಿ ಜೆಡಿಎಸ್ ನಲ್ಲಿ ಭಿನ್ನಮತ..!

Dissent in Madikeri JDS

21-03-2018

ಮಡಿಕೇರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಡಿಕೇರಿ ಜೆಡಿಎಸ್ ನಲ್ಲಿ‌ ಭಿನ್ನಮತ ಸ್ಪೋಟಗೊಂಡಿದೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ನಡೆದಿದ್ದ ಜೆಡಿಎಸ್ ಅತೃಪ್ತರ ಸಭೆಯಲ್ಲಿ ಕಾಂಗ್ರೆಸ್ ಸೇರ್ಪಡೆ ಕುರಿತು ಚಿಂತನೆ ನಡೆಸಿದ್ದ ಬೆನ್ನಲ್ಲೇ ಇಂದು ವಿರಾಜಪೇಟೆ ಕ್ಷೇತ್ರದಲ್ಲಿ‌ ನಡೆದ ಜೆಡಿಎಸ್ ಅತೃಪ್ತರ ಸಭೆಯಲ್ಲಿ ಕಾಂಗ್ರೆಸ್ ಸೇರ್ಪಡೆ ದೃಢಪಟ್ಟಿದೆ ಎನ್ನಲಾಗಿದೆ. ಮಾರ್ಚ್ 25ರಂದು ಮೈಸೂರಿಗೆ ರಾಹುಲ್ ಗಾಂಧಿ ಭೇಟಿ ನೀಡುವ ಸಂದರ್ಭ ಜೆಡಿಎಸ್ ಮಾಜಿ ಸಚಿವ ಎಂ.ಸಿ.ನಾಣಯ್ಯ ಸೇರಿದಂತೆ ಕೊಡಗಿನ ಸುಮಾರು 300ಮಂದಿ ಜೆಡಿಎಸ್ ಅತೃಪ್ತರು ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಸಭೆಯಲ್ಲಿ 60ಕ್ಕೂ ಅಧಿಕ ಮಂದಿ ಜೆಡಿಎಸ್ ಅತೃಪ್ತ ಮುಖಂಡರು ಪಾಲ್ಗೊಂಡಿದ್ದರು.


ಸಂಬಂಧಿತ ಟ್ಯಾಗ್ಗಳು

JDS Madikeri ಭಿನ್ನಮತ ಎಂ.ಸಿ.ನಾಣಯ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ