ಕುಡಿದು ಅಡ್ಡಾದಿಡ್ಡಿ ಬೈಕ್ ಚಾಲನೆ: ಸವಾರ ಸಾವು

drunk and drive: man died in bike accident

21-03-2018

ಬೆಂಗಳೂರು: ಸ್ನೇಹಿತರ ಜೊತೆ ಪಾರ್ಟಿ ಮುಗಿಸಿಕೊಂಡು ಮನೆಗೆ ಬೈಕ್‍ನಲ್ಲಿ ಹೋಗುತ್ತಿದ್ದ ಗಾರೆ ಕೆಲಸಗಾರರೊಬ್ಬರು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಆಯತಪ್ಪಿ ಬಿದ್ದು, ಮೃತಪಟ್ಟಿರುವ ದುರ್ಘಟನೆ ಬನಶಂಕರಿಯ 6ನೇ ಹಂತದಲ್ಲಿ ನಡೆದಿದೆ. ಚಿಕ್ಕಲಸಂದ್ರ ಪುರುಷೋತ್ತಮ್ ನಾಯ್ಡು (36) ಮೃತಪಟ್ಟಿವರು. ಸ್ನೇಹಿತರ ಜೊತೆ ಬನಶಂಕರಿ 6ನೇ ಹಂತದ ನೈಸ್ ರಸ್ತೆ ಬಳಿ ಮದ್ಯಪಾನ ಮಾಡಿ ಪಾರ್ಟಿ ಮುಗಿಸಿಕೊಂಡು ಮನೆಗೆ ತಮ್ಮ ಬೈಕ್‍ನಲ್ಲಿ ಹೋಗುತ್ತಿದ್ದರು.

ಮಾರ್ಗ ಮಧ್ಯೆ ಕುಡಿದ ಅಮಲಿನಲ್ಲಿ ಬೈಕ್‍ನ್ನು ಅಡ್ಡಾದಿಡ್ಡಿ ಓಡಿಸುತ್ತ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಆಂಧ್ರ ಮೂಲದ ನಾಯ್ಡು, ಗಾರೆ ಕೆಲಸ ಮಾಡಿಕೊಂಡು ಚಿಕ್ಕಲಸಂದ್ರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದರು. ಪ್ರಕರಣ ದಾಖಲಿಸಿರುವ ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Accident drunk ಮದ್ಯಪಾನ ಆಸ್ಪತ್ರೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ