ಹೊತ್ತಿ ಉರಿದ ಲಾರಿ,ಆಟೋ,ಬೈಕ್

Fire on lorry, auto, bike at highway

22-03-2018

ಮಡಿಕೇರಿ: ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಬೆಂಕಿಯ ಜ್ವಾಲೆಗೆ ಲಾರಿ ಸುಟ್ಟು ಕರಕಲಾಗಿದೆ. ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಆರ್ಜಿ ಸೇತುವೆ ಬಳಿ ತಡರಾತ್ರಿ ಘಟನೆ ನಡೆದಿದೆ. ಹೊತ್ತಿ ಉರಿಯುತ್ತಿದ್ದ ಲಾರಿಯಿಂದ ಕಿಡಿಹಾರಿ ರಸ್ತೆ ಬದಿ ನಿಂತಿದ್ದ ಆಟೋ ಮತ್ತು ಬೈಕ್ ಮೇಲೆ ಬಿದ್ದ ಪರಿಣಾಮ, ಲಾರಿಯೊಂದಿಗೆ ಆಟೋ, ಬೈಕ್ ಕೂಡ ಬೆಂಕಿಗಾಹುತಿಯಾಗಿವೆ. ಮಾಹಿತಿ ತಿಳಿದು ಕೂಡಲೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತಗಳಾಗುವುದನ್ನು ತಪ್ಪಿಸಿದ್ದಾರೆ. ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

fire lorrey ಅನಾಹುತ ವಿರಾಜಪೇಟೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ