ಲಾರಿ ತಡೆದು ಹಣ ವಸೂಲಿ: ಬಿಜೆಪಿ ಮುಖಂಡನ ಬಂಧನ..!

koppal BJP local leader arrested..!

22-03-2018

ಕೊಪ್ಪಳ: ಲಾರಿ ತಡೆದು ಹಣ ವಸೂಲಿ ಮಾಡುತ್ತಿದ್ದ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ. ಯಲಬುರ್ಗಾ ತಾಲ್ಲೂಕಿನ ಬಿಜೆಪಿ ಯುವ ಮೋರ್ಚಾ ಮುಖಂಡ ನಾಗರಾಜ್ ಹಾಲಳ್ಳಿ ಎಂಬುವರನ್ನು ಬಂಧಿಸಲಾಗಿದೆ. ಪಕ್ಷದ ಯುವ ಮೋರ್ಚಾದ ಮುಖಂಡನಾಗಿರುವ ನಾಗರಾಜ್, ಹೆದ್ದಾರಿಯಲ್ಲಿ ಬರುವ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರತಿನಿತ್ಯ ಸಾವಿರಾರು ರೂಪಾಯಿ ಹಣ ವಸೂಲಿ ಮಾಡುತ್ತಿದ್ದ ಈತ, ಕನ್ನಡಪರ ಸಂಘಟನೆಯ ತಾಲ್ಲೂಕು ಅಧ್ಯಕ್ಷರೂ ಆಗಿದ್ದಾರೆ ಎಂದು ತಿಳಿದು ಬಂದಿದೆ. ಬೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

local leader lorrey ವಸೂಲಿ ಯುವ ಮೋರ್ಚಾ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ