ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ..!

BJP-congress workers blame one another in madikeri

22-03-2018

ಮಡಿಕೇರಿ: ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ಅವರು ಜಿಲ್ಲೆಯಲ್ಲಿ ನೂತನ ಖಾಸಗಿ ಬಸ್ ನಿಲ್ದಾಣ ಸೇರಿದಂತೆ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ್ದಾರೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಡಿ ನಿರ್ಮಾಣವಾಗಿದ್ದ ಇಂದಿರಾ ಕ್ಯಾಂಟೀನ್ ಗೆ ಸಚಿವ ಎಂ.ಆರ್.ಸೀತಾರಾಂ ಚಾಲನೆ ನೀಡಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ  ಜೆಡಿಎಸ್ ಮಾಜಿ ಸಚಿವ ಎಂ.ಸಿ.ನಾಣಯ್ಯ, ಎಂಎಲ್ಸಿ ವೀಣಾ ಅಚ್ಚಯ್ಯ, ಪ್ರಮುಖರಾದ ಮಿಟ್ಟು ಚಂಗಪ್ಪ, ಚಂದ್ರಮೌಳಿ ಮತ್ತಿತರರು ಭಾಗಿಯಾಗಿದ್ದರು.

ಇನ್ನೊಂದೆಡೆ ಮಡಿಕೇರಿಯಲ್ಲಿ ನೂತನ ಖಾಸಗಿ ಬಸ್ ನಿಲ್ದಾಣಕ್ಕೆ ಎಂ.ಆರ್.ಸೀತಾರಾಂ ಉದ್ಘಾಟನೆ ನೀಡುವ ವೇಳೆ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆಯಾಗಿದೆ. ಬಸ್ ನಿಲ್ದಾಣ ಉದ್ಘಾಟನೆಗೆ ತಡೆ ಮಾಡಲು ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದು, ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿರೋಧ ಒಡ್ಡಿದರು. ಈ ವೇಳೆ ಎರಡೂ ಪಕ್ಷದ ಕಾರ್ಯಕರ್ತರು  ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಉಸ್ತುವಾರಿ ಸಚಿವರ ಸಮುಖದಲ್ಲಿ ಕಾರ್ಯಕರ್ತರು ಪರಸ್ಪರ ಅರಚಾಡಿಕೊಂಡಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಚುನಾವಣೆಯ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಬಸ್ ನಿಲ್ದಾಣ ಉದ್ಘಾಟನೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಕಾರ್ತಕರ್ತರು ಆರೋಪಿಸಿ ಪ್ರತಿಭಟಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Bus stand indira canteen ಹತೋಟಿ ತರಾತುರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ