ಕಾಲುವೆಯಲ್ಲಿ ಮುಳುಗಿ ಯುವಕ ಸಾವು

young man sunk in the canal and died

22-03-2018

ದಾವಣಗೆರೆ: ಲಿಂಗದಹಳ್ಳಿ ಬಳಿಯ ಭದ್ರಾ ಕಾಲುವೆಯಲ್ಲಿ ಈಜಲು ಹೋಗಿದ್ದ ಯುವಕನೊರ್ವ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬೆಂಕಿ ಕೆರೆ ಗ್ರಾಮದ ನಿವಾಸಿ ಗಣೇಶ್ (21) ಮೃತ ಯುವಕ. ಕಾಲುವೆಯಲ್ಲಿ ಈಜಲು ಹೋಗಿದ್ದ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿಯಿಂದ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಶವಕ್ಕಾಗಿ ಶೋಧ ನಡೆಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Canal sunk ಸ್ಥಳೀಯ ಕಾಲುವೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ