ಬಿಬಿಎಂಪಿ ಕಸದ ಲಾರಿಗೆ ಬೆಂಕಿ

fire on BBMP garbage lorry at hegganahalli

22-03-2018

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ ದುಷ್ಕರ್ಮಿಗಳು ನಿನ್ನೆ ಮಧ್ಯರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿರುವ ದುರ್ಘಟನೆ ಹೆಗ್ಗನಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಪಾಲಿಕೆ ಮೈದಾನದಲ್ಲಿ ನಿಲ್ಲಿಸಿದ್ದ ಕಸದ ಲಾರಿಗೆ ರಾತ್ರಿ 1.50ರ ಸುಮಾರಿನಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಲಾರಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ರಾಜಗೋಪಾಲ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

fire garbage ಸಂಪೂರ್ಣ ಬಿಬಿಎಂಪಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ