ಮಸಾಜ್ ನೆಪದಲ್ಲಿ ಹನಿಟ್ಯ್ರಾಪ್: ಆರೋಪಿಗಳ ಸೆರೆ

Mangalore: Honey trap 3 arrested

23-03-2018

ಮಂಗಳೂರು: ಮಸಾಜ್ ಹೆಸರಲ್ಲಿ ಹನಿಟ್ಯ್ರಾಪ್ ಮಾಡಿ ವ್ಯಕ್ತಿಯೊಬ್ಬರನ್ನು ಸುಲಿಗೆ ಮಾಡಿದ ಆರೋಪಿಗಳನ್ನು ದಸ್ತಗಿರಿ ಮಾಡಿ ಹನಿಟ್ಯ್ರಾಪ್ ಪ್ರಕರಣವೊಂದನ್ನು ಬೇಧಿಸುಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಕರಣದ ವಿವರ: ಮಾರ್ಚ್ 20ರಂದು ಮಂಗಳೂರು ನಗರದ ವ್ಯಕ್ತಿಯೊಬ್ಬರಿಗೆ ಮಸಾಜ್ ಮಾಡುವ ನೆಪದಲ್ಲಿ ಬಾಡಿಗೆ ಮನೆಯೊಂದಕ್ಕೆ ಕರೆಯಿಸಿಕೊಂಡು, ನಂತರ ಮನೆಗೆ ಹೋದ ಕೂಡಲೇ 2-3 ಅಪರಿಚಿತ ಯುವಕರು ಏಕಾಎಕಿ ಮನೆಗೆ ಪ್ರವೇಶಿಸಿ ವ್ಯಕ್ತಿಯನ್ನು ಬಲತ್ಕಾರವಾಗಿ ನಗ್ನಗೊಳಿಸಿ ಯುವತಿಯರ ಜೊತೆ ವೀಡಿಯೋ ಹಾಗೂ ಫೋಟೋ ತೆಗೆದು 3ಲಕ್ಷ ಹಣಕ್ಕೆ ಬ್ಲಾಕ್ ಮೇಲ್ ಮಾಡಿ ಹಣ ಕೊಡದಿದ್ದರೆ ವಾಟ್ಸಾಪ್, ಫೇಸ್ ಬುಕ್, ಯೂಟ್ಯೂಬ್ ಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ಸಂತ್ರಸ್ತ ವ್ಯಕ್ತಿಯಿಂದ  3ಲಕ್ಷ ರೂಪಾಯಿ ಹಣವನ್ನು ಸುಲಿಗೆ ಮಾಡಿದ್ದರು. ಈ ಬಗ್ಗೆ ಸಂತ್ರಸ್ತ ವ್ಯಕ್ತಿಯು ನೀಡಿದ ದೂರಿನಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.

ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಪೆಕ್ಟರ್ ಶಾಂತಾರಾಮ್ ರವರ ನೇತ್ರತ್ವದ ತಂಡ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಾದ ರವಿ ಗೌಡ(42), ಪ್ರೀತೇಶ್(36), ರಮೇಶ್, ಹಾಗೂ ಮೂವರು ಮಹಿಳೆಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳ ಪೈಕಿ ರವಿ ಗೌಡ ಈ ಹಿಂದೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಹಾಗೂ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದನು. ಆರೋಪಿಗಳು ಇತರ ಕೆಲವು ವ್ಯಕ್ತಿಗಳಿಗೆ ಇದೇ ರೀತಿ ಹನಿಟ್ಯ್ರಾಪ್ ಪ್ರಕರಣದಲ್ಲಿ ಭಾಗಿಯಾಗಿರುವ ಸಾಧ್ಯತೆಯಿದ್ದು, ಈ ಬಗ್ಗೆ ತನಿಖೆ ಮುಂದುವರೆದಿದೆ.


ಸಂಬಂಧಿತ ಟ್ಯಾಗ್ಗಳು

Honey trap massage ಯೂಟ್ಯೂಬ್ ಹನಿಟ್ಯ್ರಾಪ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ