ನರ್ಸ್ ಜೊತೆ ಅಸಭ್ಯ ವರ್ತನೆ: ವ್ಯಕ್ತಿಗೆ ಗೂಸಾ

A drunked man asked condom with nurse in hospital..!

23-03-2018

ಬೆಂಗಳೂರು: ಚಿಕ್ಕಬಳ್ಳಾಪುರದ ಪೆರೇಸಂದ್ರ ಆಸ್ಪತ್ರೆಯಲ್ಲಿ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸುತ್ತಿದ್ದ ಶುಶ್ರೂಷಕಿಯ ಬಳಿ ಸರ್ಕಾರಿ ನೌಕರನೊಬ್ಬ ಕಾಂಡೋಮ್ ಕೇಳಿ ಗೂಸಾ ತಿಂದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೆರೇಸಂದ್ರದ ಸರ್ಕಾರಿ ಆಸ್ಪತ್ರೆಗೆ ಬಂದ ಸರ್ಕಾರಿ ನೌಕರ, ಶುಶ್ರೂಷಕಿಯನ್ನು ಕಾಂಡೋಮ್ ನೀಡುವಂತೆ ಕೇಳಿದ್ದಾನೆ. ಅದಕ್ಕೆ ಅವರು ಪಕ್ಕದಲ್ಲಿರುವ ಪೆಟ್ಟಿಗೆಯಲ್ಲಿ ಕಾಂಡೋಮ್‍ಗಳಿದ್ದು, ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ಇದಕ್ಕೆ ಒಪ್ಪದ ಆರೋಪಿ, ನೀವೇ ತೆಗೆದುಕೊಡಿ ಎಂದು ಕುಡಿದ ಅಮಲಿನಲ್ಲಿ ಜಗಳವಾಡಿದ್ದಾನೆ. ಇದರಿಂದ ಗಾಬರಿಗೊಂಡ ಶುಶ್ರೂಷಕಿ ತನ್ನ ಪತಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಆಸ್ಪತ್ರೆಗೆ ಬಂದ ಪತಿ, ಆರೋಪಿಗೆ ಗೂಸಾ ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

condom nurse ಸರ್ಕಾರಿ ನೌಕರ ಆಸ್ಪತ್ರೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ