ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ

husband brutally assaulted his wife

23-03-2018

ಬೆಂಗಳೂರು: ಇಂದಿರಾನಗರದಲ್ಲಿ ಮಕ್ಕಳಿಲ್ಲದ ಕಾರಣ ಗಂಡನೊಬ್ಬ ತನ್ನ ಪತ್ನಿಗೆ ಚಿತ್ರಹಿಂಸೆ ನೀಡಿ ಮಾರಣಾಂತಿಕ ಹಲ್ಲೆ ನಡೆಸಿರುವ  ಘಟನೆ ನಡೆದಿದೆ. ಶಿವಕುಮಾರ್ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿ ಪತಿ. ಎರಡು ವರ್ಷದ ಹಿಂದೆ ಉಮಾದೇವಿ ಹಾಗೂ ಶಿವಕುಮಾರ್ ವಿವಾಹವಾಗಿತ್ತು. ಆದರೆ ಮದುವೆಯಾಗಿ ಎರಡು ವರ್ಷವಾದರೂ ಈ ದಂಪತಿಗೆ ಮಕ್ಕಳಾಗಿರಲಿಲ್ಲ. ಮೂರು ತಿಂಗಳ ಹಿಂದೆ ಇದೇ ವಿಚಾರಕ್ಕೆ ಗಲಾಟೆ ನಡೆದು ಹಲ್ಲೆ ಮಾಡಿದ್ದನು ಎಂದು ಹೇಳಲಾಗಿದೆ.

ಈ ಹಿಂದೆ ಶಿವಕುಮಾರ್ ಕೆಂಗೇರಿ ಬ್ರಿಜ್ಡ್ ಬಳಿ ಉಮಾದೇವಿಯನ್ನು ತಳ್ಳಿದ್ದ. ಆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಮಾದೇವಿಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಂತರ ಮತ್ತೆ ಉಮಾದೇವಿಯನ್ನ ಗಂಡನ ಮನೆಗೆ ಕಳುಹಿಸಲಾಗಿತ್ತು. ಆದರೆ ಶಿವಕುಮಾರ್ ಮತ್ತೆ ತನ್ನ ಪತ್ನಿಯ ಮೇಲೆ ವಿಕೃತಿ ಮೆರದಿದ್ದಾನೆ.

ಸದ್ಯ ಗಾಯಾಳು ಉಮಾದೇವಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಮಾದೇವಿಗೆ ಅತ್ತೆ-ಮಾವ ಕೂಡ ಕಿರುಕುಳ ನೀಡುತ್ತಿದ್ದರು. ಶಿವಕುಮಾರ್ ಗೆ ಇನ್ನೊಂದು ಮದುವೆ ಮಾಡಲು ಈ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ