ರೈಲಿಗೆ ತಲೆಕೊಟ್ಟು ಯುವತಿ ಆತ್ಮಹತ್ಯೆ!

teen girl suicide on railway track

23-03-2018

ಕಲಬುರಗಿ: ಚಲಿಸುತ್ತಿರುವ ರೈಲಿಗೆ ತಲೆ ಕೊಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೋರಂಟಿ ಹನುಮಾನ್ ದೇವಸ್ಥಾನ ಬಳಿಯ ರೈಲ್ವೆ ಹಳಿ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ 22 ವರ್ಷದ ಯುವತಿಯ ಹೆಸರು ವಿಳಾಸ ಪತ್ತೆಯಾಗಿಲ್ಲ. ರೈಲ್ವೆ ಹಳಿಗಳ ಮೇಲೆ ಶವ ಪತ್ತೆಯಾಗಿದ್ದು, ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Train Suicide ವಿಳಾಸ ಮಾಹಿತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ