ಬಿಜೆಪಿ ಚುನಾವಣಾ ಸಮಿತಿಯಿಂದ ಮೊದಲ ಸಭೆ

The first meeting of BJP electoral committee

24-03-2018

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ, ಚುನಾವಣೆ ಸಿದ್ಧತೆ ಕುರಿತು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಇಂದು ಸಭೆ ಕರೆದಿದೆ. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಬಿಜೆಪಿ ಚುನಾವಣಾ ಸಮಿತಿಯಿಂದ ನಡೆಸುತ್ತಿರುವ ಮೊದಲ ಸಭೆ ಇದಾಗಿದೆ. ಸಭೆಯಲ್ಲಿ ಬಿಜೆಪಿ ಚುನಾವಣೆ ಉಸ್ತುವಾರಿ ಪ್ರಕಾಶ್ ಜಾವಡೇಕರ್, ಸಂಸದೆ ಶೋಭಾ ಕರಂದ್ಲಾಜೆ, ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ್ ಲಿಂಬಾವಳಿ, ಸಿ.ಟಿ ರವಿ, ರವಿ ಕುಮಾರ್, ಇತರೆ ಪ್ರತಿನಿಧಿಗಳು ಸೇರಿದಂತೆ ಬಿಜೆಪಿ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಚುನಾವಣಾ ಸಿದ್ಧತೆ, ಸಂಘಟನಾತ್ಮಕ ಜಿಲ್ಲೆಗಳಲ್ಲಿ ಚುನಾವಣೆ ದೃಷ್ಟಿಯಿಂದ ಕೈಗೊಂಡಿರುವ ಸಿದ್ಧತೆ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಸಲಿದ್ದಾರೆ ಹಾಗು ಚುನಾವಣೆಗೆ ಸಂಬಂಧಿಸದಂತೆ ಇತರೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ