ಅತ್ಯಾಚಾರಕ್ಕೆ ಯತ್ನ: ಎಎಸ್ಐ ಬಂಧನ

Attempt to rape: ASI arrested

24-03-2018

ಚಿಕ್ಕಮಗಳೂರು: ಎಎಸ್ಐ ವಿರುದ್ಧ ಅತ್ಯಾಚಾರ ಯತ್ನ ಪ್ರಕರಣ ಚಿಕ್ಕಮಗಳೂರಿನ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮಹಿಳೆಯೊಬ್ಬರು ಎಎಸ್ಐ ಕುಮಾರನಾಯ್ಕ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತಾಲ್ಲೂಕಿನ ಕೆರೆಮನೆ ಗ್ರಾಮದಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಹಾಗೂ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ, ನೊಂದ ಮಹಿಳೆ ದೂರು ನೀಡಿದ್ದಾರೆ. ಚುನಾವಣಾ ಕರ್ತವ್ಯದ ಗಸ್ತು ಬಂದಿರುವ ಬಗ್ಗೆ ಸಹಿ ಪಡೆಯಲು ಹೋಗಿದ್ದ ಎಎಸೈ, ಈ ವೇಳೆ ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಮಹಿಳೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಎಸ್.ಪಿ ಅಣ್ಣಾಮಲೈ ಮಾರ್ಗದರ್ಶನದಲ್ಲಿ ಎನ್.ಆರ್.ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕುಮಾರನಾಯ್ಕನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

 

 

 

 

 

 

 

 

 

 

 


ಸಂಬಂಧಿತ ಟ್ಯಾಗ್ಗಳು

ASI rape ಒಂಟಿ ಮಹಿಳೆ ವಿಚಾರಣೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ