ಜೂಜು ಅಡ್ಡೆ ಮೇಲೆ ದಾಳಿ: 16 ಮಂದಿ ಬಂಧನ

16 gamblers arrested in doddaballapur

26-03-2018

ಬೆಂಗಳೂರು: ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರದಲ್ಲಿ ಜೂಜು ಅಡ್ಡೆಗಳ ಮೇಲೆ ದಾಳಿ ನಡೆಸಿದ ದೊಡ್ಡಬೆಳವಂಗಲ ಪೊಲೀಸರು 16 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ 50ಸಾವಿರ ರೂ.ನಗದು, 5 ದ್ವಿಚಕ್ರ ವಾಹನ, 6 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದೊಡ್ಡಬೆಳವಂಗಲ ಎಸ್ಐ ಗಜೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿ ತಾಲ್ಲೂಕಿ‌ನ ಬೆಣಕಿನಮಡಗು ಹೊರವಲಯದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

gambling PSI ನೇತೃತ್ವ ದ್ವಿಚಕ್ರ ವಾಹನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ