‘ಜೆಡಿಎಸ್ ಅವಕಾಶವಾದಿ, ಬಿಜೆಪಿ ಕೋಮುವಾದಿ’-ಸಿಎಂ26-03-2018

ಮೈಸೂರು: ಕಾಂಗ್ರೆಸ್ ನ ಜನಾಶೀರ್ವಾದ ಯಾತ್ರೆಗೆ ಆಗಮಿಸಿದ ಕಾರ್ಯಕರ್ತರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ. ಮೈಸೂರಿನ ರಾಮಕೃಷ್ಣ ನಗರದ ತಮ್ಮ ನಿವಾಸದಲ್ಲಿ  ಮಾತನಾಡಿದ ಅವರು, ಸಮಾವೇಶಕ್ಕೆ ನಿರೀಕ್ಷೆಗೂ ಮೀರಿ ಜನ ಬಂದಿದ್ದಾರೆ. ಮುಂಬರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಹಂತದ ಶಿಫಾರಸು ಸಭೆ ನಡೆಸುತ್ತೇವೆ. ಅಂತಿಮವಾಗಿ ಹೈ ಕಮಾಂಡ್ ಅಭ್ಯರ್ಥಿಗಳ ಪಟ್ಟಿ ಬಿಡುಗೆಡೆ ಮಾಡುತ್ತದೆ ಎಂದರು. ರಾಹುಲ್ ಗಾಂಧಿ ಮಲೆನಾಡ ಭಾಗದಲ್ಲಿ ಏಪ್ರಿಲ್ ಮೊದಲನೇ ವಾರದಲ್ಲಿ ಮೂರನೇ ಹಂತದ ಜನಾಶೀರ್ವಾದ ಪ್ರವಾಸ ಕೈಗೊಳ್ಳಲಿದ್ದಾರೆ ಎಂದೂ ತಿಳಿಸಿದರು.

ಜೆಡಿಎಸ್ ಪಕ್ಷ ಜ್ಯಾತ್ಯತೀತ ಪಕ್ಷವಾಗಿ ಉಳಿದಿಲ್ಲ, ಈ ಹಿಂದೆ ಬಿಜೆಪಿ ಜೊತೆ ಕೈಜೋಡಿಸಿ ಸರ್ಕಾರ ನಡೆಸಿದ್ದಾರೆ. ಈ ಬಾರಿಯೂ ಬಿಜೆಪಿ ಜೊತೆ ಕೈ ಜೋಡಿಸುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಪರ, ಜೆಡಿಎಸ್ ಅವಕಾಶವಾದಿ, ಬಿಜೆಪಿ ಕೋಮುವಾದಿ ಎಂದು ಸಿಎಂ ಲೇವಡಿ ಮಾಡಿದರು.


ಸಂಬಂಧಿತ ಟ್ಯಾಗ್ಗಳು

Siddaramaiah Rahul gandhi ಅಭ್ಯರ್ಥಿ ಜ್ಯಾತ್ಯತೀತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ