ಕುಸ್ತಿ ಪಂದ್ಯದ ವೇಳೆ ಯುವಕರ ನಡುವೆ ಘರ್ಷಣೆ

fight between 2 groups of youth: 4 injured

26-03-2018

ದಾವಣಗೆರೆ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ಮಧ್ಯೆ ಘರ್ಷಣೆಯಾಗಿ ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಹರಪನಹಳ್ಳಿ ತಾಲ್ಲೂಕಿನ ಹಲವಾಗಲು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಜಾತ್ರೆ ಪ್ರಯುಕ್ತ ಕುಸ್ತಿ ಸ್ಪರ್ಧೆ ಏರ್ಪಡಿಸಲಾಗಿತ್ತು, ಕುಸ್ತಿ ಪಂದ್ಯದ ವೇಳೆ, ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರ ಮಧ್ಯೆಯ ಜಗಳ ವಿಕೋಪಕ್ಕೆ ತಿರುಗಿ ಎರಡೂ ಗುಂಪಿನ ನಡುವೆ ಘರ್ಷಣೆಯಾಗಿದೆ. ಗಾಯಾಳುಗಳನ್ನು ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.  ಘಟನೆಯಿಂದ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹಲವಾಗಲು ಪೊಲೀಸ್ ಠಾಣೆಯಲ್ಲಿ ಎರಡೂ ಗುಂಪುಗಳಿಂದ ದೂರು ದಾಖಲಾಗಿದೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ