ಕಲ್ಲಿನಿಂದ ಜಜ್ಜಿ ಮಹಿಳೆ ಭೀಕರ ಕೊಲೆ

A women bruetely murdered

26-03-2018

ಬೆಂಗಳೂರು: ನಗರದ ಹೊರವಲಯದ ಬ್ಯಾಡರ ಹಳ್ಳಿಯಲ್ಲಿ ಮಹಿಳೆಯೊಬ್ಬರ ಮೇಲೆ ಹೊಟ್ಟೆಗೆ ಚಾಕುವಿನಿಂದ ಚುಚ್ಚಿ ಕಲ್ಲಿನಿಂದ ತಲೆ ಜಜ್ಜಿ ಭೀಕರವಾಗಿ ಕೊಲೆಗೈದಿರುವ  ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಕೊಲೆ ಮಾಡಿರುವ ಮಹಿಳೆಯು ಸುಮಾರು 35 ವರ್ಷ ವಯಸ್ಸಿನವರಾಗಿದ್ದು ಸದ್ಯಕ್ಕೆ ಆಕೆಯ ಹೆಸರು ವಿಳಾಸ ತಿಳಿದುಬಂದಿಲ್ಲ. ಕೊಲೆಯಾದ ಮಹಿಳೆಗೆ ಪತಿ ಮೃತಪಟ್ಟಿದ್ದು ಬ್ಯಾಡರ ಹಳ್ಳಿಯಲ್ಲಿ ಭಿಕ್ಷೆ ಬೇಡಿಕೊಂಡು ಓಡಾಡುತ್ತಿದ್ದಳು ನಿನ್ನೆ ರಾತ್ರಿ ಪೈಪ್‍ಲೈನ್ ಬಳಿಯ ಈಸ್ಟ್ ವೆಸ್ಟ್ ಕಾಲೇಜು ರಸ್ತೆಯ ಬಳಿ ಮಹಿಳೆ ಕೂಲಿ ಕೆಲಸ ಮಾಡುತ್ತಿದ್ದ ನಾಲ್ಕೈದು ಮಂದಿ ಯುವಕರ ಜೊತೆ ಇರುವುದನ್ನು ಸ್ಥಳೀಯರು ನೋಡಿದ್ದಾರೆ.

ಬೆಳಿಗ್ಗೆ ವಾಯು ವಿಹಾರಕ್ಕೆ ಹೋಗುವವರು ಮಹಿಳೆ ಕೊಲೆಯಾಗಿರುವುದನ್ನು ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕಾಮಿಸಿದ ಬ್ಯಾಡರಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೂ ಮುನ್ನ ಮಹಿಳೆಯ ಮೇಲೆ ಅತ್ಯಾಚಾರ ನಡೆದಿರಬಹುದೆಂದು ಶಂಕೆ ವ್ಯಕ್ತವಾಗಿದ್ದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ಅತ್ಯಾಚಾರ ಈಸ್ಟ್ ವೆಸ್ಟ್ Murder women


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ