'ವಾಟ್ಸಾಪ್ ಬಿಟ್ಟು ಓದಿಕೋ ಎಂದಿದ್ದೇ ತಪ್ಪಾಯ್ತು'?

uncle said leave whatsapp and concentrate on study: but engineer student Quit home

26-03-2018

ಬೆಂಗಳೂರು: ವಾಟ್ಸಾಪ್ ಚಾಟಿಂಗ್ ಬಿಟ್ಟು ಓದಿಕೊಳ್ಳುವಂತೆ ಎಂದು ಹೇಳಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮನೆ ಬಿಟ್ಟು ಹೋಗಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಈಸ್ಟ್ ವೆಸ್ಟ್ ಕಾಲೇಜಿನಲ್ಲಿ ದ್ವಿತೀಯ ವರ್ಷ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಶಾಂತ್ ಗೌಡ ಮನೆ ಬಿಟ್ಟು ಹೋದ ವಿದ್ಯಾರ್ಥಿಯಾಗಿದ್ದಾನೆ, ಬೆಂಗಳೂರಿನ ವಿಜಯನಗರದಲ್ಲಿನ ತಮ್ಮ ಮಾವನ ಮನೆಯಲ್ಲಿ ವಾಸವಿದ್ದನು.

ಇಂಟರ್ನಲ್ಸ್ ಎಕ್ಸಾಂ ಇದೆ ವಾಟ್ಸಾಪ್ ಚಾಟಿಂಗ್ ಬಿಟ್ಟು ಓದಿಕೋ ಎಂದು ಮಾವ ಸ್ವಾಮಿ ಬುದ್ಧಿ ಹೇಳಿದ್ದಕ್ಕೆ ಪ್ರಶಾಂತ್ ಮರುದಿನವೇ ಹಿರಿಯೂರಿಗೆ ಬರುವುದಾಗಿ ತಂದೆ ತಾಯಿಗೆ ಫೋನ್ ಮಾಡಿ ತಿಳಿಸಿದ್ದಾನೆ. ಬಳಿಕ ತನ್ನ ಫೇಸ್ ಬುಕ್ ಅಕೌಂಟ್, ಗೂಗಲ್ ಅಕೌಂಟ್, ವಾಟ್ಸಾಪ್, ಗ್ಯಾಲರಿಯಲ್ಲಿದ್ದ ಫೋಟೋಗಳನ್ನ ಡಿಲೀಟ್ ಮಾಡಿ ಮನೆ ಬಿಟ್ಟು ಹೋಗಿದ್ದಾನೆ. ನಾಗರಾಜ್, ಹಾಗೂ ಚಿಂತಾಮಣಿ ದಂಪತಿಯ ಒಬ್ಬನೇ ಮಗನಾಗಿದ್ದ ಪ್ರಶಾಂತ್ ಹತ್ತು ದಿನದಿಂದ ಕಣ್ಮರೆಯಾಗಿದ್ದು. ಪ್ರಶಾಂತ್ ತಂದೆ-ತಾಯಿ ಆತನಿಗೆ ಕಣ್ಣೀರಿಟ್ಟು ಪರಿತಪಿಸುತ್ತಿದ್ದಾರೆ.

ಪ್ರಶಾಂತ್ ತಂದೆ ತಾಯಿ ಫೇಸ್ ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಮಗನಿಗಾಗಿ ಹುಡುಕಾಡುತ್ತಿದ್ದಾರೆ. ಮಗ ಬಾರದಿದ್ದರೆ ನಾನು ಬದುಕುವುದಿಲ್ಲ ಎಂದು ಪ್ರಶಾಂತ್ ತಾಯಿ ಚಿಂತಾಮಣಿ ಕಣ್ಣೀರು ಹಾಕುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

watsapp Engineering ಫೇಸ್ ಬುಕ್ ಜಾಲತಾಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ