ಹಿರಿಯ ನಟಿ ಜಯಂತಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Kannada actress Jayanthi hospitalized with breathing problems

26-03-2018

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಸ್ಯಾಂಡಲ್‍ವುಡ್‍ನ ಅಭಿನಯ ಶಾರದೆ ಜಯಂತಿ ಅವರು ಇಂದು ಬೆಳಿಗ್ಗೆ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯಂತಿ ಅವರು ಹಲವು ವರ್ಷಗಳಿಂದ ಅಸ್ತಮಾದಿಂದ ಬಳಲುತ್ತಿದ್ದರು, ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಯಂತಿ ಪುತ್ರ ಕೃಷ್ಣಕುಮಾರ್ ತಿಳಿಸಿದ್ದಾರೆ. ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಮ್ಮ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅಭಿಮಾನಿಗಳು ಯಾವುದೇ ರೀತಿಯಲ್ಲಿ ಗಾಬರಿಯಾಗೋದು ಬೇಡ. ಅಮ್ಮನ ಆರೋಗ್ಯಕ್ಕಾಗಿ ಎಲ್ಲರೂ ಪ್ರಾರ್ಥಿಸಿ. ಸದ್ಯ ವೈದ್ಯಕೀಯ ತಪಾಸಣೆಗಳು ನಡೆಯುತ್ತಿವೆ ಎಂದು ಕೃಷ್ಣಕುಮಾರ್ ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

actress Jayanthi hospital ತಪಾಸಣೆ ಕೃಷ್ಣಕುಮಾರ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ