ಹೆದ್ದಾರಿಯಲ್ಲಿ ಜೆಸಿಬಿ ಮತ್ತು ಲಾರಿ ಸುಟ್ಟು ಭಸ್ಮ

JCB and lorry burnt: on national highway 4

26-03-2018

ಬೆಳಗಾವಿ: ಜೆಸಿಬಿಯನ್ನು ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿದೆ. ಕೊಲ್ಹಾಪುರದಿಂದ ಬೆಳಗಾವಿ ಕಡೆ ಬರುತ್ತಿದ್ದ ಲಾರಿ ಮಾರ್ಗ ಮಧ್ಯೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಜೆಸಿಬಿ ಮತ್ತು ಲಾರಿ ಸುಟ್ಟು ಕರಕಲಾಗಿವೆ. ಬೆಳಗಾವಿ ತಾಲ್ಲೂಕಿನ ಭೂತರಾಮನಹಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಅವಘಡದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ಥವಾಗಿತ್ತು. ಸ್ಥಳಕ್ಕೆ ಕಾಕತಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ