ವಂಚಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

frauder caught and assaulted by by public

27-03-2018

ಬೆಳಗಾವಿ: ಮನೆ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದವನಿಗೆ ಹಿಗ್ಗಾಮಗ್ಗಾ ಥಳಿಸಿದ್ದಾರೆ. ಅದಲ್ಲದೇ ಅರೆಬೆತ್ತಲೆ ಮಾಡಿ ಚಪ್ಪಲಿ ಹಾರ ಹಾಕಿದ ಮಹಿಳೆಯರು ಮನಬಂದಂತೆ ವಂಚಕನಿಗೆ ಹೊಡೆದಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಘಟನೆ ನಡೆದಿದ್ದು, ಮೊಹಮ್ಮದ್ ರಫೀಕ್ ದೇಸಾಯಿ ಎಂಬುವನಿಗೆ ಥಳಿಸಿದ್ದಾರೆ. ಜಿಲ್ಲಾಸ್ಪತ್ರೆಯ ಮುಂಭಾಗದಲ್ಲಿ ಉಚಿತವಾಗಿ ಊಟ ನೀಡುತ್ತಿದ್ದ ರಫೀಕ್, ಊಟಕ್ಕೆ ಬರುವ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಆ ನಂತರ ಮನೆ ಕೊಡಿಸುವುದಾಗಿ ನಂಬಿಸುತ್ತಿದ್ದ. ಈ ರೀತಿ ಅನೇಕ ಮಹಿಳೆಯರಿಗೆ ಲಕ್ಷಾಂತರ ಹಣ ವಂಚಿಸಿದ್ದಾನೆ ಎಂದು ತಿಳಿದು ಬಂದಿದೆ. ಈತನನ್ನ ಇಂದು ಜಿಲ್ಲಾಸ್ಪತ್ರೆ ಬಳಿಯೇ ಹಿಡಿದು ಅರೆ ಬೆತ್ತಲೆ ಮಾಡಿ ಜಿಲ್ಲಾಧಿಕಾರಿ ಕಚೇರಿಯವರೆಗೂ ಮೆರವಣಿಗೆ ಮಾಡಿಸಿದ್ದಾರೆ. ನಂತರದಲ್ಲಿ ಸ್ಥಳಕ್ಕಾಗಮಿಸಿದ ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Fraud Home ಊಟ ಜಿಲ್ಲಾಸ್ಪತ್ರೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ