ಚುನಾವಣೆ: ನಾಮಪತ್ರ ಸಲ್ಲಿಕೆಗೆ ಏ.24 ಕೊನೇ ದಿನ

Elections: april 24th is last day for filing nominations

27-03-2018

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಮೇ 12 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಮುಖ್ಯ ಚುನಾವಣೆ ಆಯುಕ್ತ ಓಂ ಪ್ರಕಾಶ್ ರಾವತ್, 2018ರ ರಾಜ್ಯ ವಿಧಾನಸಭೆ ಚುನಾವಣಾ ವಿವರಗಳನ್ನು ಪ್ರಕಟಿಸಿದರು.

ಇಂದಿನಿಂದಲೇ ನೀತಿ ಸಂಹಿತಿ ಜಾರಿಗೆ ಬರಲಿದೆ: ಮೇ 12ರಂದು ಚುನಾವಣೆ ನಡೆಯಲಿದ್ದು, ಮೇ 15ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ 17-4-2018ರಿಂದ ಪ್ರಾರಂಭವಾಗಲಿದ್ದು, ನಾಮ ಪತ್ರ ಸಲ್ಲಿಕೆಗೆ ಕಡೇ ದಿನ 24-4-2018 ಹಾಗೂ ನಾಮ ಪತ್ರಗಳ ಪರಿಶೀಲನೆ 25-04-2018ರಂದು ನಡೆಯಲಿದೆ. ಚುನಾವಣಾ ಪ್ರಕ್ರಿಯೆಗಳು ಮೇ 28ರ ಒಳಗೆ ಪೂರ್ಣಗೊಳ್ಳಬೇಕಿದೆ.

ಇನ್ನು ಚುನಾವಣಾ ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬರಲಿದ್ದು, ಓರ್ವ ಅಭ್ಯರ್ಥಿಗೆ ಚುನಾವಣಾ ವೆಚ್ಚದ ಮಿತಿಯನ್ನು ಚುನಾವಣಾ ಆಯೋಗ 28 ಲಕ್ಷ ರೂಪಾಯಿಗಳಿಗೆ ಮಿತಿಗೊಳಿಸಿದೆ. ಇನ್ನೂ ರಾಜ್ಯ ಚುನಾವಣಾ ಆಯೋಗ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ನ್ಯಾಯಸಮ್ಮತ ಹಾಗೂ ನಿರ್ಭೀತಿಯಿಂದ ಜನರು ತಮ್ಮ ಹಕ್ಕು ಚಲಾಯಿಸುವ ಬಗ್ಗೆ ಈಗಾಗಲೆ ಎಲ್ಲಾ ಜಿಲ್ಲೆಗಳಲ್ಲಿ ಅಲ್ಲಿನ ಅಧಿಕಾರಿಗಳ ನೆರವಿನಿಂದ ಜಾಗೃತಿ ಮೂಡಿಸಲಾಗುತ್ತಿದೆ.


ಸಂಬಂಧಿತ ಟ್ಯಾಗ್ಗಳು

Assembly election code of conduct ಜಾಗೃತಿ ನ್ಯಾಯಸಮ್ಮತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ