ಸಿಎಂ‌ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

No alliance with congress and BJP

27-03-2018

ಮೈಸೂರು: ಕಾಂಗ್ರೆಸ್ ಮತ್ತು ಬಿಜೆಪಿ ಜೊತೆಗೆ ಮೈತ್ರಿ ಇಲ್ಲ, ನಮಗೆ ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್ ಸಮಾನ ಎದುರಾಳಿಗಳು, ಬಿಜೆಪಿಯನ್ನ‌ ಅಧಿಕಾರಕ್ಕೆ ಬರದಂತೆ ಮಾಡಲು ನಮಗೂ ಗೊತ್ತು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರ ಸ್ವಾಮಿ ಗುಡುಗಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಭಯ ಶುರುವಾಗಿದೆ, ಅದಕ್ಕಾಗಿಯೇ ಜೆಡಿಎಸ್‌ ಬಗ್ಗೆ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಕುಟುಕಿದರು. ಸಿಎಂ ಜೆಡಿಎಸ್ ಪಕ್ಷಕ್ಕೆ 28ಸ್ಥಾನ ಬರುತ್ತದೆ ಅಂತಾರೆ, ಆದರೆ ನಾನು ಹೇಳುತ್ತೇನೆ ಕೇಳಿ, ಕಾಂಗ್ರೆಸ್ಗೆ 28ಸ್ಥಾನ ಬರುತ್ತದೆ, ಜೆಡಿಎಸ್ಗೆ 128 ಬರುತ್ತೆ ಎಂದು ಸಿಎಂಗೆ ತಿರುಗೇಟು ನೀಡಿದ್ದಾರೆ.

ಇನ್ನು ಮೇ 12 ರಂದು ಚುನಾವಣೆ ನಡೆಯಲಿದ್ದು, ನಂಜನಗೂಡು ನಂಜುಡೇಶ್ವರ ಆಶೀರ್ವಾದ ನನ್ನ ಮೇಲಿದೆ. ಕಾಂಗ್ರೆಸ್, ಬಿಜೆಪಿಗಿಂತ ಹತ್ತು ಹೆಜ್ಜೆ ಮುಂದೆ ಇದ್ದೇನೆ ಎಂದರು. ಬಾಕಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಒಂದು ವಾರದಲ್ಲಿ ಬಿಡುಗಡೆ ಮಾಡುತ್ತೇನೆ. ಚುನಾವಣೆಯಲ್ಲಿ ಜನರ ನಾಡಿ‌ಮಿಡಿತ ಅರಿತಿದ್ದೇನೆ. ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ