‘ಚುನಾವಣಾ ಪರೀಕ್ಷೆಗೆ ಸಿದ್ಧವಾಗಿದ್ದೇವೆ'-ಗುಂಡೂರಾವ್27-03-2018

ಬೆಂಗಳೂರು: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದೆ, ಚುನಾವಣೆ ಘೋಷಣೆ ಸಂತೋಷ ತಂದಿದೆ, ಎಲ್ಲ ಪಕ್ಷಗಳಿಗೂ ಇದು ಪರೀಕ್ಷಾ ಸಮಯ, ಪರೀಕ್ಷೆಗೆ ನಾವೆಲ್ಲರೂ ಸಿದ್ಧವಾಗಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ಗೆ ಜನರು ಐದು ವರ್ಷ ಆಶೀರ್ವಾದ ಮಾಡಿದ್ದಾರೆ. ಐದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕಾವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ, ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಸರ್ಕಾರ ಉತ್ತಮ ಸಾಧನೆ ಮಾಡಿದೆ, ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದೇವೆ ಎಂದರು.

ಕರ್ನಾಟಕ ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ರಾಜ್ಯ, ಸರ್ಕಾರದ ಎಲ್ಲ ಜನಪರ ಕಾರ್ಯಕ್ರಮಗಳೂ ಜನರ ಮನ ಗೆದ್ದಿವೆ, ಇಷ್ಟೆಲ್ಲ ಕೆಲಸಗಳನ್ನೂ ಮಾಡಿರುವ ನಮಗೆ ಜನ ಮತ್ತೆ ಆಶೀರ್ವಾದ ಮಾಡುವ ವಿಶ್ವಾಸ ಇದೆ ಎಂದರು.

ಚುನಾವಣೆ ಎಂಬ ಪರೀಕ್ಷೆಯಲ್ಲಿ ನಾವು ಡಿಸ್ಟಿಂಕ್ಷನ್ನಲ್ಲಿ ಪಾಸಾಗುತ್ತೇವೆ, ಸಿದ್ದರಾಮಯ್ಯ ನೇತೃತ್ವದ ಸರಕಾರ ಎರಡನೆಯ ಬಾರಿಯೂ ತೇರ್ಗಡೆಯಾಗುತ್ತೆ, ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯರ ಯಾತ್ರೆಗಳಲ್ಲಿ ಜನ ಅಪಾರ ಪ್ರಮಾಣದಲ್ಲಿ ಸೇರಿದ್ದರು, ರಾಜ್ಯದ ಜನತೆಗೆ ನಮ್ಮ ಸರಕಾರದ ಮೇಲೆ ವಿಶ್ವಾಸ ಬಂದಿದೆ, ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಗೆಲ್ಲುವ ವಿಶ್ವಾಸ ಇದೆ ಎಂದರು.

 


ಸಂಬಂಧಿತ ಟ್ಯಾಗ್ಗಳು

Dinesh Gundu Rao KPCC ಅಸ್ಥಿರತೆ ಡಿಸ್ಟಿಂಕ್ಷನ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ