ಮೊದಲ ದಿನವೇ ಮೌಲ್ಯಮಾಪನಕ್ಕೆ ಉಪನ್ಯಾಸಕರ ಕೊರತೆ

Lecturer

27-03-2018

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಪೂರ್ಣಗೊಂಡಿದ್ದು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಆರಂಭಿಸಲಾಗಿದೆ ನಿನ್ನೆಯಿಂದ ಆರಂಭವಾದ ಮೊದಲ ದಿನವೇ ಮೌಲ್ಯಮಾಪನಕ್ಕೆ ಉಪನ್ಯಾಸಕರ ಕೊರತೆ ಕಂಡುಬಂದಿದ್ದು ಗೈರಾದ ಉಪನ್ಯಾಸಕರಿಗೆ ಪದವಿ ಪೂರ್ವ ಶಿಕ್ಷಣ ಮಂಡಳಿ ನೋಟಿಸ್ ಕಳುಹಿಸಿದೆ.

ರಾಜ್ಯದ 53 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಏಕಕಾಲಕ್ಕೆ ಆರಂಭಿಸಲಾಗಿದೆ. ಮೌಲ್ಯಮಾಪನ ಕಾರ್ಯಕ್ಕೆ ಒಟ್ಟು 24054 ಉಪನ್ಯಾಸಕರನ್ನು ನಿಯೋಜನೆ ಮಾಡಿದ್ದು, ಅವರಲ್ಲಿ ಮೊದಲ ದಿನ 16 ಸಾವಿರದಷ್ಟು ಉಪನ್ಯಾಸಕರು ಮಾತ್ರ ಮೌಲ್ಯಮಾಪನ ಕೇಂದ್ರಕ್ಕೆ ಹಾಜರಾಗಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿದರು.

ಶೇ.30ರಷ್ಟು ಉಪನ್ಯಾಸಕರು ಮೊದಲ ದಿನದ ಕರ್ತವ್ಯಕ್ಕೆ ಗೈರಾಗಿದ್ದು ಅವರಿಗೆಲ್ಲಾ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕಿ ಶಿಖಾ ಮಾಹಿತಿ ನೀಡಿದ್ದಾರೆ. ಉಪನ್ಯಾಸಕರ ಗೈರಿನ ನಡುವೆಯೂ ಸಕಾಲಕ್ಕೆ ಮೌಲ್ಯಮಾಪನ ಕೆಲಸವನ್ನು ಪೂರ್ಣಗೊಳಿಸಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

evaluation 2nd Puc ಕರ್ತವ್ಯ ಶಿಕ್ಷಣ ಮಂಡಳಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ